ಮೈಸೂರು: ಕಳೆದ ಒಂದು ತಿಂಗಳಿನಿಂದ ತಿ. ನರಸೀಪುರ ತಾಲೂಕಿನ ಕುರುಬಾಳನಹುಂಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದು ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ತಿ. ನರಸೀಪುರ: ನಾಯಿ ಬೇಟೆಯಾಡಲು ಬಂದು ಬೋನಿಗೆ ಬಿದ್ದ ಚಿರತೆ - ಕುರುಬಾಳನಹುಂಡಿ ಚಿರತೆ ದಾಳಿ
ಸಾಕು ಪ್ರಾಣಿಗಳನ್ನು ಕೊಂದು ತಿಂದು ಮೈಸೂರು ಜಿಲ್ಲೆಯ ಕುರುಬಾಳನಹುಂಡಿ ಗ್ರಾಮದ ಜನರಲ್ಲಿ ಜೀವ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದು, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.
ಬೋನಿಗೆ ಬಿದ್ದ ಚಿರತೆ
ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಚಿರತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಜೀವ ಭಯ ಹುಟ್ಟು ಹಾಕಿತ್ತು. ಈ ಸಂಬಂಧ ಅರಣ್ಯ ಇಲಾಖೆಗೆ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರೈತ ರಾಜು ಎಂಬವವರ ಜಮೀನಿನಲ್ಲಿ ಬೋನು ಇರಿಸಿ ನಾಯಿ ಕಟ್ಟಿ ಹಾಕಲಾಗಿತ್ತು.
ಸುಲಭವಾಗಿ ಆಹಾರ ಸಿಕ್ಕಿತ್ತೆಂದು ಖುಷಿಯಿಂದ ಬಂದು ಬೋನಿಗೆ ಬಿದ್ದಿದೆ. ಗ್ರಾಮಸ್ಥರ ಮಾಹಿತಿ ಮೆರೆಗೆ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಸೆರೆಯಾಗಿರುವ ಚಿರತೆಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ನಿರ್ಧರಿಸಿದ್ದಾರೆ.