ಕರ್ನಾಟಕ

karnataka

ETV Bharat / city

ಚೋಟಾ ಪಾಕಿಸ್ತಾನ್ ವಿಡಿಯೋ ವೈರಲ್: ಸಾಕ್ಷ್ಯ ಕಲೆಹಾಕುತ್ತಿರುವ ಪೊಲೀಸರು - ಪೊಲೀಸ್​ ವರಿಷ್ಠಾಧಿಕಾರಿ ಆರ್.ಚೇತನ್

ಕಲವಂದೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ 'ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ' ಎಂಬ ವಿಡಿಯೋ, ಆಡಿಯೋ ವೈರಲ್​ ಪ್ರಕರಣದ ಕುರಿತು ತನಿಖೆ ಚುರುಕುಗೊಂಡಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಾಕ್ಷಿಗಳನ್ನು ಕಲೆಹಾಕಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ತಿಳಿಸಿದರು.

ಮೈಸೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆರ್.ಚೇತನ್
ಮೈಸೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆರ್.ಚೇತನ್

By

Published : May 6, 2022, 12:07 PM IST

ಮೈಸೂರು: ವಿವಾದಿತ ವಿಡಿಯೋ, ಆಡಿಯೋ ವೈರಲ್‌ ಪ್ರಕರಣ ಸಂಬಂಧ ಎಲೆಕ್ಟ್ರಾನಿಕ್ ಸಾಕ್ಷಿಗಳನ್ನು ಕಲೆಹಾಕಲಾಗುತ್ತಿದೆ. ಈಗಾಗಲೇ ವಿಡಿಯೋದಲ್ಲಿ ಇರುವ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು.

ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ ಆಕ್ಷೇಪಾರ್ಹ ಹೇಳಿಕೆ ಇದೆ. ಈ ಸಂಬಂಧ ಈಗಾಗಲೇ ದೂರು ದಾಖಲು ಮಾಡಿಕೊಳ್ಳಲಾಗಿದೆ. ಐಪಿಸಿ ಸಕ್ಷನ್ 153-A, 153-B, 505-2 ಹಾಗೂ 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋದಲ್ಲಿ ಮಾತುಗಳನ್ನಾಡಿದ ವ್ಯಕ್ತಿಗಳ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದರು.


ಸಮಾಜದ ಶಾಂತಿಗೆ ಭಂಗ ತರುವ ಹಾಗೂ ದೇಶದ್ರೋಹ ಹೇಳಿಕೆ ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ಕೃತ್ಯಕ್ಕೆ ಕಾರಣ, ಉದ್ದೇಶ ಹಾಗೂ ಹಿನ್ನೆಲೆಯ ಬಗ್ಗೆ ಸಹ ತನಿಖೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು‌.

ಇದನ್ನೂ ಓದಿ:ಚೋಟಾ ಪಾಕಿಸ್ತಾನ್ ಆಡಿಯೋ ವೈರಲ್​.. ಎಫ್​ಐಆರ್​ ದಾಖಲು, ಪರಿಶೀಲಿಸಿ ಕ್ರಮ ಎಂದ ಸಿಎಂ

ABOUT THE AUTHOR

...view details