ಕರ್ನಾಟಕ

karnataka

ETV Bharat / city

ವೇತನ ಸಿಗದೆ ಬೇಸತ್ತ ಪೌರ ಕಾರ್ಮಿಕ ಗ್ರಾಪಂ ಕಚೇರಿಯೊಳಗೇ ನೇಣಿಗೆ ಶರಣು - ಗ್ರಾಮ ಪಂಚಾಯತಿ ಕಾರ್ಯಲಯದಲ್ಲಿ ಆತ್ಮಹತ್ಯೆ

ಈ ಗ್ರಾಮ ಪಂಚಾಯತ್‌ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಕಳೆದ 9 ತಿಂಗಳಿನಿಂದ ವೇತನ ನೀಡಿಲ್ಲ. ಈ ಸಂಬಂಧ‌ ಬೆಳಗ್ಗೆ ‌ಪೌರಕಾರ್ಮಿಕರು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜಮ್ಮ ನಡುವೆ ಮಾತಿನ ಚಕಮಕಿ ನಡೆದಿತ್ತು..

suicide
suicide

By

Published : Aug 4, 2021, 6:28 PM IST

ಮೈಸೂರು :ಕಳೆದ 9 ತಿಂಗಳಿನಿಂದ ವೇತನ ಸಿಗದೆ ಮನನೊಂದ ಪೌರಕಾರ್ಮಿಕನೊಬ್ಬ ಗ್ರಾಮ ಪಂಚಾಯತ್‌ ಕಾರ್ಯಾಲಯದಲ್ಲೇ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ‌ ಕಳಲೆ ಗ್ರಾಮದಲ್ಲಿ ನಡೆದಿದೆ.

ಕಳೆದ 20 ವರ್ಷಗಳಿಂದ ಗ್ರಾಮ ಪಂಚಾಯತ್‌ನಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ 40 ವರ್ಷದ ರಂಗ, ಗ್ರಾಮ ಪಂಚಾಯತ್‌ನೊಳಗಿರುವ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ನೇಣಿಗೆ ಶರಣಾದ ಪೌರಕಾರ್ಮಿಕ

ಈ ಗ್ರಾಮ ಪಂಚಾಯತ್‌ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಕಳೆದ 9 ತಿಂಗಳಿನಿಂದ ವೇತನ ನೀಡಿಲ್ಲ. ಈ ಸಂಬಂಧ‌ ಬೆಳಗ್ಗೆ ‌ಪೌರಕಾರ್ಮಿಕರು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜಮ್ಮ ನಡುವೆ ಮಾತಿನ ಚಕಮಕಿ ನಡೆದಿತ್ತು.

ಮಧ್ಯಾಹ್ನ ಗ್ರಾಪಂ ಸಿಬ್ಬಂದಿ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ‌ರಂಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಘಟನೆ ಬಗ್ಗೆ ಪಿಡಿಒ ವಿವರಿಸಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕುಟುಂಬದವರ ಆಕ್ರೋಶ ಮುಗಿಲುಮುಟ್ಟಿದೆ.

ABOUT THE AUTHOR

...view details