ಮೈಸೂರು: ಮೈತ್ರಿ ಅಭ್ಯರ್ಥಿ ಪರ ಪ್ರಚಾರದ ಕುರಿತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಚರ್ಚೆ ನಡೆಯುತ್ತಿದ್ದ ವೇಳೆ ಕಾರ್ಯಕರ್ತರು ಗಲಾಟೆ ಮಾಡಿದ ಘಟನೆ ನಡೆದಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೆಗೌಡ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಸಚಿವ ಸಾ.ರಾ.ಮಹೇಶ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಸಹ ಇದ್ದರು.
ಜೆಡಿಎಸ್ ಸಭೆಯಲ್ಲಿ ಮೋದಿಗೆ ಜೈ ಘೋಷಣೆ ಈ ವೇಳೆ ಇದ್ದಕ್ಕಿದ್ದಂತೆ ಗಲಾಟೆ ಮಾಡಿದ ಕಾರ್ಯಕರ್ತರು, ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡುವುದಿಲ್ಲ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಕೆಲಸ ಮಾಡುತ್ತೇವೆ ಎಂದು ಕೂಗಾಡಿದರು. ಅಲ್ಲದೆ, ಪ್ರಧಾನಿ ಮೋದಿ ಪರ ಘೋಷಣೆಯನ್ನೂ ಕೂಗಿದರು. ಇದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ವೇದಿಕೆಯಿಂದಲೇ ಕಾರ್ಯಕರ್ತರನ್ನು ಸಮಾಧಾನ ಮಾಡಲು ಯತ್ನಿಸಿದ ಜಿ.ಟಿ.ದೇವೇಗೌಡ ಕೊನೆಗೆ ವೇದಿಕೆಯಿಂದ ಕೆಳಗಿಳಿದು ಕಾರ್ಯಕರ್ತರನ್ನು ಸಮಾಧಾನ ಮಾಡಿದರು. ನಮ್ಮ ಅಭಿಪ್ರಾಯಗಳಿಗೂ ಬೆಲೆ ಕೊಡಿ ಎಂದು ಕಾರ್ಯಕರ್ತರು ಕೂಗಾಡುತ್ತಲೇ ಸಚಿವರಿಗೆ ಘೇರಾವ್ ಹಾಕಿದರು.