ಕರ್ನಾಟಕ

karnataka

ETV Bharat / city

ಮೈಸೂರು ವಿವಿ ಪದವಿ ವಿದ್ಯಾರ್ಥಿಗಳಿಗೆ 15 ದಿನ ಪಾಠ.. ಕುಲಪತಿ ಜಿ ಹೇಮಂತ್ ಕುಮಾರ್ - ಮೈಸೂರು ವಿವಿ ಪದವಿ ವಿದ್ಯಾರ್ಥಿಗಳ ಪರೀಕ್ಷೆ

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಬರುವುದರಿಂದ ಆಯಾ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರ ತೆರೆದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿ ಕೊಡಲಾಗುವುದು..

class-will-held-for-mysore-university-student
ಕುಲಪತಿ ಜಿ ಹೇಮಂತ್ ಕುಮಾರ್

By

Published : Jul 31, 2020, 7:50 PM IST

ಮೈಸೂರು :ಅಂತಿಮ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 16 ದಿನಗಳ ಪಾಠ ಮಾಡಿ ಧೈರ್ಯ ತುಂಬಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ ಹೇಮಂತ್‌ಕುಮಾರ್ ತಿಳಿಸಿದ್ದಾರೆ.

ಸೆಪ್ಟೆಂಬರ್ ಅಂತ್ಯದೊಳಗೆ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಗಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿರುವುದರಿಂದ ಅಧ್ಯಯನ ಕೇಂದ್ರಗಳ ಮುಖ್ಯಸ್ಥರನ್ನ ಕರೆದು ಚರ್ಚೆ ಮಾಡಿ ಮೂರು ವಾರಗಳ ಕಾಲ ವಿದ್ಯಾರ್ಥಿಗಳಿಗೆ ಪಾಠ ಮಾಡಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಮೈಸೂರು ವಿವಿ ಪದವಿ ವಿದ್ಯಾರ್ಥಿಗಳಿಗೆ 15 ದಿನ ಪಾಠ

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಬರುವುದರಿಂದ ಆಯಾ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರ ತೆರೆದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿ ಕೊಡಲಾಗುವುದು. ಪ್ರಥಮ ವರ್ಷದ ಪದವಿ ಪ್ರವೇಶಕ್ಕೆ ಆನ್‌ಲೈನ್​ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details