ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ್ದ 250 ಅಂಗಡಿ ಮಳಿಗೆಗಳನ್ನು ಬೆಳ್ಳಂಬೆಳಗ್ಗೆ ಪೋಲಿಸರ ಸರ್ಪಗಾವಲಿನಲ್ಲಿ ತೆರವುಗೊಳಿಸಲಾಯಿತು.
ಚಾಮುಂಡಿ ಬೆಟ್ಟದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: ಅನಧಿಕೃತ 250 ಅಂಗಡಿ ತೆರವು - Chamundi hill news
ಚಾಮುಂಡಿ ಬೆಟ್ಟದಲ್ಲಿ ಫುಟ್ಪಾತ್ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ್ದ ಸುಮಾರು 250 ಅಂಗಡಿ ಮಳಿಗೆಗಳನ್ನು ಇಂದು ಬೆಳಗ್ಗೆ ತೆರವುಗೊಳಿಸಲಾಗಿದೆ.
ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಅಕ್ಕಪಕ್ಕ ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಹಾಗೂ ಫುಟ್ ಪಾತ್ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ್ದ ಸುಮಾರು 250 ಅಂಗಡಿ ಮಳಿಗೆಗಳನ್ನು ಇಂದು ಬೆಳಗ್ಗೆ ಬಿಗಿ ಪೋಲಿಸ್ ಬಂದೋಬಸ್ತ್ ನಲ್ಲಿ ಮೈಸೂರು ತಾಲೂಕಿನ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಅಂಗಡಿಗಳನ್ನು 5 ಜೆಸಿಬಿಗಳು ತೆರವುಗೊಳಿಸಿದವು.
ಈ ಸಂದರ್ಭದಲ್ಲಿ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೋಲಿಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಹೆಚ್ಚಿನ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಈ ಅನಧಿಕೃತ ಅಂಗಡಿಗಳು ಫುಟ್ಪಾತ್ ನಲ್ಲಿ ನಿರ್ಮಾಣ ಮಾಡಿಕೊಂಡು ಭಕ್ತರಿಗೆ ತೊಂದರೆಯಾಗುತ್ತದೆ ಎಂಬ ದೂರಿನ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.