ಮೈಸೂರು:ಕಳೆದ ಶುಕ್ರವಾರ ಅಗಲಿದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಪ್ರದ್ಮಶ್ರೀ ಪ್ರಶಸ್ತಿಗಾಗಿ ಸರ್ಕಾರ ಸಮಯ ಸಂದರ್ಭ ನೋಡಿಕೊಂಡು ನಮ್ಮ ಪ್ರಸ್ತಾಪ ಸಿದ್ಧಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ನೀಡಲು ಸಮ್ಮತಿ ಇದೆ: ಸಿಎಂ ಬಸವರಾಜ ಬೊಮ್ಮಾಯಿ - mysore
ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್, ದಿವಂಗತ ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಲು ನಮ್ಮ ಸಮ್ಮತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪುನೀತ್ ರಾಜ್ ಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಅವರು, ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ. ಸಿದ್ದರಾಮಯ್ಯ ತಮ್ಮ ಪ್ರಸ್ತಾಪ ಸಲ್ಲಿಸಲಿ. ಎಲ್ಲದಕ್ಕೂ ಒಂದು ನಿಯಮ ಪಾಲನೆ ಇರುತ್ತೆ. ಅದರ ಅಡಿಯಲ್ಲಿ ನಾವು ಸಾಗುತ್ತೇವೆ ಎಂದಿದ್ದಾರೆ.
ಪುನೀತ್ ರಾಜ್‌ಕುಮಾರ್ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಇಂತಹ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಜಲಾಶಯಗಳಿಗೆ ಬಾಗಿನ ಅರ್ಪಣೆ ಖುಷಿ ವಿಚಾರ
ಜಲಾಶಯಗಳಿಗೆ ಬಾಗಿನ ಅರ್ಪಿಸುವುದು ಖುಷಿಯ ವಿಚಾರವಾಗಿದೆ. ನಮಗಿಂತ ರೈತರಿಗೆ ಖುಷಿಯಾದರೆ, ಸಂತೋಷ. ಈ ಹಿಂದೆಯೂ ಕೂಡ ನೀರಾವರಿ ಸಚಿವನಾಗಿ ಬಾಗಿನ ಅರ್ಪಿಸಿದ್ದೇನೆ. ಕಬಿನಿ ಜಲಾಶಯದ ಮುಂದೆ ಬೃಂದಾವನ ಮಾದರಿ ಮಾಡುವ ಪ್ರಸ್ತಾಪ ಹಿಂದಿನಿಂದಲೂ ಇದೆ. ಅದನ್ನೆಲ್ಲ ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಹೇಳಿದರು.