ಮೈಸೂರು: ರಾಜ್ಯಕ್ಕೆ ನಿವಾರ್ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಚಂಡಮಾರುತದಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಿವಾರ್ ಚಂಡಮಾರುತ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಚಂಡಮಾರುತದ ಹಿನ್ನೆಲೆ ಈಗಾಗಲೇ ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದೇವೆ. ಜೊತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು.
ಇದನ್ನೂ ಓದಿ: ಸಂಜೆ ವೇಳೆಗೆ ಭೀಕರ ಸ್ವರೂಪ ತಾಳಲಿದೆ ‘ನಿವಾರ್’: ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್
ಇಂದು 25-30 ನಿಗಮ ಮಂಡಳಿ ಆದೇಶ ಬರಲಿದೆ. ಎಲ್ಲಾ ಪಟ್ಟಿಯನ್ನು ಕೊಟ್ಟು ಬಂದಿದ್ದೇನೆ. ಸಂಜೆ ಒಳಗೆ ಆದೇಶ ಬರಲಿದೆ. ಯಾರಿಗೆ ಅವಕಾಶ ಕೈ ತಪ್ಪಿದೆಯೋ ಅವರಿಗೆ ಮುಂದಿನ ಹಂತದಲ್ಲಿ ಪರಿಶೀಲಿಸುತ್ತೇವೆ. ಜೊತೆಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕಿದೆ ಎಂದು ಸಿಎಂ ತಿಳಿಸಿದರು.