ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚಾಗಿರುವ ಕಡೆ ಭೇಟಿ ನೀಡಬೇಕು ಎಂದುಕೊಂಡಿದ್ದೇನೆ. ಇದ್ರ ಜೊತೆಗೆ ಎಲ್ಲಾ ಗಡಿ ಜಿಲ್ಲೆಗಳಿಗೂ ಹೋಗಲು ತೀರ್ಮಾನಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗಡಿ ಜಿಲ್ಲೆಗೆ ಭೇಟಿ ನೀಡಿ ಕೋವಿಡ್ ಪರಿಶೀಲನೆ ಮಾಡಲು ಸಿಎಂ ನಿರ್ಧಾರ - basavaraja bommai
ಮೈಸೂರು ಜಿಲ್ಲೆ ಪ್ರವಾಸ ಮಾಡಿ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
![ಗಡಿ ಜಿಲ್ಲೆಗೆ ಭೇಟಿ ನೀಡಿ ಕೋವಿಡ್ ಪರಿಶೀಲನೆ ಮಾಡಲು ಸಿಎಂ ನಿರ್ಧಾರ CM's decision to visit the border district and inspect covid](https://etvbharatimages.akamaized.net/etvbharat/prod-images/768-512-12716012-thumbnail-3x2-nin.jpg)
ಮೈಸೂರು ಪ್ರವಾಸಕ್ಕೂ ಮುನ್ನ ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದೇನೆ, ಅಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಚಾಮುಂಡೇಶ್ವರಿ, ಸುತ್ತೂರು ಮಠಕ್ಕೂ ಭೇಟಿ ಕೊಡುತ್ತೇನೆ ಎಂದರು.
ಖಾತೆ ಹಂಚಿಕೆಯಲ್ಲಿ ಸಚಿವರ ಅಸಮಾಧಾನ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಲಿಲ್ಲ. ಬಹುಶಃ ಖಾತೆಗಳ ಅಸಮಾಧಾನ ವಿಷಯ ಕಗ್ಗಂಟಾಗುತ್ತಿದ್ದು, ಸ್ವತಃ ಸಿಎಂಗೆ ಇದು ಪರಿಹರಿಸಲಾಗದಂತಾಗಿದೆ ಎನ್ನಲಾಗುತ್ತಿದೆ. ಅದಕ್ಕಾಗಿ ಪ್ರತಿಕ್ರಿಯೆ ನೀಡದೆ ಹೈಕಮಾಂಡ್ ಕಡೆ ನೋಡುತ್ತಿದ್ದಾರೆ ಎನ್ನಲಾಗುತ್ತಿದೆ.