ಮೈಸೂರು :ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದ ಚಾಮರಾಜನಗರ-ಮೈಸೂರು ಚುನಾವಣೆಯ ದ್ವಿಸದಸ್ಯ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ ಫಲಿತಾಂಶ ಹೊರ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ 2800ಕ್ಕೂ ಅಧಿಕ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.