ಕರ್ನಾಟಕ

karnataka

ETV Bharat / city

ಸಿದ್ದರಾಮಯ್ಯನವರ ನೇತೃತ್ವದಲ್ಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ : ಡಾ. ಯತೀಂದ್ರ ಸಿದ್ದರಾಮಯ್ಯ

ಈ ಬಾರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಜೆಡಿಎಸ್ ಪಕ್ಷ ಮಾತ್ರ ತನ್ನ ನೆಲೆಯನ್ನು ಕಳೆದುಕೊಳ್ಳಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು..

Mysuru
ಯತೀಂದ್ರ ಸಿದ್ದರಾಮಯ್ಯ

By

Published : Jul 2, 2021, 1:06 PM IST

ಮೈಸೂರು :ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷ ಬಿಟ್ಟು ಬಂದ ನಂತರ ಒಳ್ಳೆಯದಾಗಿದೆ. ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭವಿಷ್ಯ ನುಡಿದಿದಾರೆ.

ವರುಣಾ ಕ್ಷೇತ್ರದ ಸೋಮೇಶ್ವರಪುರ ಗ್ರಾಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾವುದೇ ಪಾಪ ಮಾಡಿಲ್ಲ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ತಾವಾಗಿಯೇ ಜೆಡಿಎಸ್ ಪಕ್ಷ ಬಿಡಲಿಲ್ಲ. ಅವರ ಬೆಳವಣಿಗೆಯನ್ನು ತಡೆಯಲು ಜೆಡಿಎಸ್ ಪಕ್ಷದಿಂದ ಹೊರ ಹಾಕಲಾಯಿತು. ಆ ನಂತರ ಅವರಿಗೆ ಒಳ್ಳೆಯದೇ ಆಗಿದೆ. ಈಗಲೂ ಒಳ್ಳೆಯದೇ ಆಗುತ್ತಿದೆ.

ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಯತೀಂದ್ರ ಸಿದ್ದರಾಮಯ್ಯ

ಈ ಬಾರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಜೆಡಿಎಸ್ ಪಕ್ಷ ಮಾತ್ರ ತನ್ನ ನೆಲೆಯನ್ನು ಕಳೆದುಕೊಳ್ಳಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:ಶ್ರೀರಾಮುಲು ಪಿಎ ಬಂಧನ ವಿರೋಧಿಗಳಿಗೆ ಅಪಪ್ರಚಾರದ ಸರಕಾಗಲಿದೆ ; ಕಿಡಿ ಹೊತ್ತಿಸುತ್ತಾ ವಿಜಯೇಂದ್ರ ಟ್ವೀಟ್​?

ABOUT THE AUTHOR

...view details