ಮೈಸೂರು: ಕೊರೊನಾ ವೈರಸ್ನಿಂದ ಮುಕ್ತಿ ಹೊಂದಿ ಸಹಜ ಸ್ಥಿತಿಗೆ ಮರಳುತ್ತಿದ್ದ ಸಾಂಸ್ಕೃತಿಕ ನಗರಿಯಲ್ಲಿ ಮತ್ತೆ ಎರಡನೇ ಪ್ರಕರಣ ವರದಿಯಾಗಿದೆ.
ಕೊರೊನಾ ಮುಕ್ತವಾಗುತ್ತಿದ್ದ ಮೈಸೂರಲ್ಲಿ ಇಂದು ಮತ್ತೊಂದು ಪ್ರಕರಣ ಪತ್ತೆ! - ಕೋವಿಡ್-19
ಕೋವಿಡ್ ಕಾವಿನಿಂದ ಹೊರ ಬಂದಿದ್ದ ಮೈಸೂರು ಜಿಲ್ಲೆಯಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದ್ದು, ಮುಂಬೈ ಟ್ರಾವೆಲ್ ಹಿಸ್ಟರಿ ಹೊಂದಿರುವ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸಾಂಸ್ಕೃತಿಕ ನಗರಿಯಲ್ಲಿ ಮತ್ತೇ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಬಾರಿಗೆ ಸೋಂಕಿಗೆ ಗುರಿಯಾಗಿದ್ದ 90 ಜನರು ಗುಣಮುಖರಾದ 18 ದಿನಗಳ ನಂತರ ಮೊದಲ ಕೊರೊನಾ ಪ್ರಕರಣ ವರದಿಯಾಗಿತ್ತು. ಇದೀಗ ಮುಂಬೈ ಟ್ರಾವೆಲ್ ಹಿಸ್ಟರಿ ಹೊಂದಿರುವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಎರಡನೇ ಪ್ರಕರಣ ಇಂದು ವರದಿಯಾಗಿದೆ.
ಸೋಂಕಿತ ವ್ಯಕ್ತಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.