ಮೈಸೂರು: ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು 12 ಮಂದಿಗೆ ಕೊರೊನಾ ಸೋಂಕು ದೃಢ... ನಾಲ್ವರು ಗುಣಮುಖ - mysore news
2ನೇ ಹಂತದಲ್ಲಿ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು 12 ಮಂದಿಗೆ ಸೋಂಕು ತಗುಲಿದೆ. ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿಂದು 12 ಮಂದಿಗೆ ಕೊರೊನಾ ಪಾಸಿಟಿವ್...4 ಮಂದಿ ಡಿಸ್ಚಾರ್ಜ್
ಅನ್ಲಾಕ್ ಆದ ಬಳಿಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೇರೆ ಜಿಲ್ಲೆಯಿಂದ ಬಂದವರಲ್ಲೇ ವೈರಸ್ ಕಾಣಿಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 235 ಸೋಂಕಿತರು ಪತ್ತೆಯಾಗಿದ್ದು, ಈ ಪೈಕಿ 130 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನುಳಿದ 104 ಜನರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಒಬ್ಬರು ಸಾವನ್ನಪ್ಪಿದಾರೆ ಎಂದು ತಿಳಿಸಿದ್ದಾರೆ.