ಮೈಸೂರು:ಮೈಸೂರಿನಲ್ಲಿ ಕೊರೊನಾ ಇನ್ನೆರಡು ವಾರದಲ್ಲಿ ನಿಯಂತ್ರಣಕ್ಕೆ ಬರಲಿದೆ. ಸದ್ಯ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಮೈಸೂರಲ್ಲಿ ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿದೆ: ಡಿಸಿ - ಮೈಸೂರಿನಲ್ಲಿ ಕೊರೊನಾ ಇನ್ನೆರಡು ವಾರದಲ್ಲಿ ನಿಯಂತ್ರಣಕ್ಕೆ
ಮೈಸೂರು ಜಿಲ್ಲೆಯಲ್ಲಿನ ಕೊರೊನಾ ಸೋಂಕು ವಿಚಾರವಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
DC Bagadi Gowtham
ಸರಗೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ರಾಜ್ಯ ಸರ್ಕಾರ ಸೂಚಿಸಿರುವ ನಾಲ್ಕು ನಿಯಮಗಳು ಮುಂದಿನ ಎರಡು ವಾರಗಳ ಕಾಲ ಯಥಾಸ್ಥಿತಿಯಲ್ಲಿ ಮುಂದುವರೆಯಲಿವೆ. ಆರ್ಟಿ-ಪಿಸಿಆರ್ ಟೆಸ್ಟ್ ಹೆಚ್ಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ಶೇ.9ಕ್ಕೆ ಇಳಿದಿದೆ. ಶೇ.5ರಷ್ಟಾಗಲು ಇನ್ನು 15 ದಿನಗಳು ಬೇಕು. ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿದೆ ಎಂದು ಜಿಲ್ಲಾಧಿಕಾರಿ ವಿಶ್ವಾಸ ವ್ಯಕ್ತಪಡಿಸಿದರು.