ಕರ್ನಾಟಕ

karnataka

ETV Bharat / city

ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ.. ಕೋವಿಡ್​ ದಿಢೀರ್​ ಏರಿಕೆ ಬೆನ್ನಲ್ಲೇ ರಾಜ್ಯಕ್ಕೆ ಬೀಳುತ್ತಾ ಬೀಗ? - ಕೋವಿಡ್ ನಿಯಂತ್ರಣಕ್ಕೆ ಸಿಎಂ ಬೊಮ್ಮಾಯಿ ಸಭೆ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭಗೊಂಡಿದ್ದು, ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ
ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ

By

Published : Jan 4, 2022, 7:05 PM IST

Updated : Jan 4, 2022, 7:13 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದ್ವಿಗುಣಗೊಂಡು ಎರಡು ಸಾವಿರದ ಗಡಿ ದಾಟಿದ್ದು, ಕಠಿಣ ನಿರ್ಬಂಧ ಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಆರಂಭವಾಗಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ.

ಕೊರೊನಾ ಪಾಸಿಟಿವಿಟಿ ದರ ಇಂದು ದಿಢೀರ್ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಶೇ.1.6 ರಿಂದ ಶೇ.2.59 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇ.3 ರಷ್ಟು ಏರಿಕೆ ಆದರೆ ಲಾಕ್​ಡೌನ್ ಮಾಡುವಂತೆ ತಜ್ಞರು ಶಿಫಾರಸು ಮಾಡಿದ್ದು, ತಜ್ಞರ ಸಲಹೆ ಮೇರೆಗೆ ಇಂದು ಯಾವ ನಿರ್ಧಾರ ಕೈಗೊಳ್ಳಬೇಕು ಎನ್ನುವ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ನೈಟ್ ಕರ್ಫ್ಯೂ ಸಮಯ ವಿಸ್ತರಣೆ, ವೀಕೆಂಡ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್, ವಾಣಿಜ್ಯ ಚಟುವಟಿಕೆಗಳಿಗೆ ಶೇ.50 ನಿರ್ಬಂಧ ಸೇರಿದಂತೆ ಯಾವೆಲ್ಲಾ ರೀತಿಯ ನಿರ್ಬಂಧ ಹೇರಬೇಕು ಎನ್ನುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗ್ತಿದೆ.

(ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಸಿನಿಮೀಯ ಘಟನೆ.. 22 ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗಳು..)

Last Updated : Jan 4, 2022, 7:13 PM IST

ABOUT THE AUTHOR

...view details