ಕರ್ನಾಟಕ

karnataka

By

Published : Sep 6, 2020, 2:49 PM IST

Updated : Sep 6, 2020, 3:51 PM IST

ETV Bharat / city

ವಿದೇಶಿ ವಿದ್ಯಾರ್ಥಿಗಳ ಹಾಗೂ ಪ್ರಜೆಗಳ ಮೇಲೆ ತೀವ್ರ ನಿಗಾ: ಡಿಸಿಪಿ ಡಾ.ಎ.ಎನ್.ಪ್ರಕಾಶಗೌಡ

ಮೈಸೂರಿನಲ್ಲಿ ಮೂರು ವರ್ಷಗಳಲ್ಲಿ 45 ಗಾಂಜಾ ಪ್ರಕರಣಗಳು ದಾಖಲಾಗಿದೆ. ಅಲ್ಲದೇ 'ಖಾಟ್' ಎಂಬ ವಿದೇಶಿ ಗಾಂಜಾವನ್ನು ಮೈಸೂರಿನಲ್ಲಿ 2 ವರ್ಷಗಳ ಹಿಂದೆ ವಶಪಡಿಸಿಕೊಳ್ಳಲಾಗಿದೆ. ಇದನ್ನು ಬಿಟ್ಟು ಮೈಸೂರಿನಲ್ಲಿ ಯಾವುದೇ ದೊಡ್ಡಮಟ್ಟದ ಡ್ರಗ್ಸ್ ಮಾಫಿಯಾ ನಡೆದಿಲ್ಲ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ತಿಳಿಸಿದರು.

DCP Dr. AN Prakashgowda said Intensive Care of Foreign Students and Citizens
ವಿದೇಶಿ ವಿದ್ಯಾರ್ಥಿಗಳ ಹಾಗೂ ಪ್ರಜೆಗಳ ಮೇಲೆ ತೀವ್ರ ನಿಗಾ: ಡಿಸಿಪಿ ಡಾ.ಎ.ಎನ್.ಪ್ರಕಾಶಗೌಡ

ಮೈಸೂರು: ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಹಾಗೂ ವಿದೇಶಿ ಪ್ರಜೆಗಳ ಮೇಲೆ ತೀವ್ರ ನಿಗ ಇಡಲಾಗಿದೆ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಹೇಳಿದರು.

ವಿದೇಶಿ ವಿದ್ಯಾರ್ಥಿಗಳ ಹಾಗೂ ಪ್ರಜೆಗಳ ಮೇಲೆ ತೀವ್ರ ನಿಗಾ: ಡಿಸಿಪಿ ಡಾ.ಎ.ಎನ್.ಪ್ರಕಾಶಗೌಡ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಮೂರು ವರ್ಷಗಳಲ್ಲಿ 45 ಗಾಂಜಾ ಪ್ರಕರಣಗಳು ದಾಖಲಾಗಿದೆ. ಅಲ್ಲದೇ 'ಖಾಟ್' ಎಂಬ ವಿದೇಶಿ ಗಾಂಜಾವನ್ನು ಮೈಸೂರಿನಲ್ಲಿ 2 ವರ್ಷಗಳ ಹಿಂದೆ ವಶಪಡಿಸಿಕೊಳ್ಳಲಾಗಿದೆ. ಇದನ್ನು ಬಿಟ್ಟು ಮೈಸೂರಿನಲ್ಲಿ ಯಾವುದೇ ದೊಡ್ಡಮಟ್ಟದ ಡ್ರಗ್ಸ್ ಮಾಫಿಯಾ ನಡೆದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿರುವ ರೆಸ್ಟೋರೆಂಟ್, ಬಾರ್ ಸೇರಿದಂತೆ ಇತರೆ‌ಡೆ ಪಾರ್ಟಿಗಳು ನಡೆಯಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುವ ವ್ಯಕ್ತಿಗಳ ಹೆಸರನ್ನು ಪಟ್ಟಿಮಾಡಲಾಗಿದೆ. ಯಾರ್ಯಾರು ಖರೀದಿ ಮಾಡುತ್ತಿದ್ದರು. ಯಾವ ಸ್ಥಳದಲ್ಲಿ ಮಾರಾಟವಾಗುತ್ತಿತ್ತು ಎಂಬುದರ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಅಲ್ಲದೇ ತಂಡವನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.


Last Updated : Sep 6, 2020, 3:51 PM IST

ABOUT THE AUTHOR

...view details