ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅರಣ್ಯ ಇಲಾಖೆಯವರು ಅನಾಹುತಗಳು ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡಿದ್ದಾರೆ. ಆಧಿದೇವತೆ ಮಾಸ್ತಮ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕಾಡು ಪ್ರಾಣಿಗಳ ಉಪಟಳ ತಪ್ಪಿಸಲು ಟ್ರೆಂಚ್ ನಿರ್ಮಿಸಿರುವುದಕ್ಕೆ ಜನ ಮೆಚ್ಚು ವ್ಯಕ್ತಪಡಿಸಿದ್ದಾರೆ.
ಹೆಚ್.ಡಿ. ಕೋಟೆ ತಾಲೂಕಿನ ಡಿ.ಬಿ. ಕುಪ್ಪೆ ಅರಣ್ಯ ವಲಯದ ಮಾಸ್ತಮ್ಮ ಗುಡಿಗೆ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಬರುತ್ತಾರೆ. ಅಲ್ಲದೇ ಸಿನಿಮಾ ಚಿತ್ರೀಕರಣ ಕೂಡ ಇಲ್ಲಿ ಜರುಗುತ್ತದೆ. ಆಗ ಈ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಾರೆ.