ಕರ್ನಾಟಕ

karnataka

ETV Bharat / city

ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ - ಪೇಜಾವರಶ್ರೀ ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆಸ್ಪತ್ರೆಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು.

Pejavara Sree
ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆಗೆ ಧನ್ವಂತರಿ ಹೋಮಹವನ

By

Published : Dec 21, 2019, 4:46 PM IST

ಮೈಸೂರು/ಉಡುಪಿ: ಉಡುಪಿ ಪೇಜಾವರ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ

ಬಳಿಕ ಮಾತನಾಡಿದ ಅವರು, ಪೂಜ್ಯ ಪೇಜಾವರಶ್ರೀಗಳು ಅನಾರೋಗ್ಯದಿಂದಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರನ್ನು ನೋಡಿ ಬಂದಿದ್ದೇನೆ. ನಿಧಾನವಾಗಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವಯೋಧರ್ಮದ ಪ್ರಕಾರ ಚಿಕಿತ್ಸೆಗೆ ಶ್ರೀಗಳು ನಿಧಾನವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ರು.

ಇನ್ನೊಂದೆಡೆ, ನಗರದ ಶ್ರೀ ಕೃಷ್ಣಧಾಮದಲ್ಲಿ ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಷ್ಣುಸಹಸ್ರನಾಮ, ಧನ್ವಂತರಿ ಹೋಮ, ಹವನ, ಪಾರಾಯಣ ಮತ್ತು ಸಾಮೂಹಿಕ ಪ್ರಾರ್ಥನೆಗಳು ನಡೆದವು.

ABOUT THE AUTHOR

...view details