ಕರ್ನಾಟಕ

karnataka

ETV Bharat / city

ಉದ್ದೇಶಪೂರ್ವಕವಾಗಿಯೇ ಸಿದ್ದರಾಮಯ್ಯ ನನಗೆ ಸಚಿವ ಸ್ಥಾನ ತಪ್ಪಿಸಿದ್ರು: ಬಿ.ಸಿ. ಪಾಟೀಲ್ - ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅನರ್ಹ ಶಾಸಕ ಶಾಸಕ ಬಿ.ಸಿ.ಪಾಟೀಲ್

ಅನರ್ಹ ಶಾಸಕರು ಪಕ್ಷ ಬಿಡಲು ಕಾರಣವೇನೆಂದು ಕಾಂಗ್ರೆಸ್​ನವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ನಲ್ಲಿ ತಾಯಿಯಂತೆ ನಡೆದುಕೊಳ್ಳಲಿಲ್ಲ. ಉದ್ದೇಶಪೂರ್ವಕವಾಗಿ ನನಗೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡಿದ್ರು ಎಂದು ಅನರ್ಹ ಶಾಸಕ ಶಾಸಕ ಬಿ.ಸಿ.ಪಾಟೀಲ್ ಆರೋಪಿಸಿದ್ದಾರೆ.

ಅನರ್ಹ ಶಾಸಕ ಶಾಸಕ ಬಿ.ಸಿ.ಪಾಟೀಲ್

By

Published : Oct 21, 2019, 7:47 PM IST

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ನಲ್ಲಿ ತಾಯಿಯಂತೆ ನಡೆದುಕೊಳ್ಳಲಿಲ್ಲ, ಉದ್ದೇಶಪೂರ್ವಕವಾಗಿ ನನಗೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡಿದ್ರು ಎಂದು ಅನರ್ಹ ಶಾಸಕ ಶಾಸಕ ಬಿ.ಸಿ. ಪಾಟೀಲ್ ಆರೋಪಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರು ಪಕ್ಷ ಬಿಡಲು ಕಾರಣವೇನೆಂದು ಕಾಂಗ್ರೆಸ್​ನವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಆರಂಭದ ದಿನಗಳಲ್ಲಿ ನಮಗೆ ಆಸೆ ಆಮಿಷಗಳನ್ನ ಒಡ್ಡಿದ್ದರೂ ನಾವು ಪಕ್ಷ ಬಿಟ್ಟಿರಲಿಲ್ಲ. ಆದರೆ ಒಂದು ವರ್ಷ 2 ತಿಂಗಳು ಕಾದು ದೃಢ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ನಿರ್ಧಾರದ ಹಿಂದೆ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಹಿತ, ಚಿಂತನೆ ಇದೆ. ಸಮ್ಮಿಶ್ರ ಸರ್ಕಾರದಿಂದ ಸಮಗ್ರ ಅಭಿವೃದ್ಧಿ ಸಾಧ್ಯವಿರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ನಾವು ನಿರೀಕ್ಷಿಸಿದಂತೆ ಉತ್ತರ ಕರ್ನಾಟಕಕ್ಕೆ ಹೆಚ್ಚು ಒತ್ತು ಸಿಗುತ್ತಿದೆ. ನನ್ನದೇ ಕ್ಷೇತ್ರಕ್ಕೆ ಮೆಡಿಕಲ್‌ ಕಾಲೇಜು ಮಂಜೂರಾಗಿದೆ. ಬಹು‌ ದಿನಗಳ ಕನಸಾಗಿದ್ದ ಏತ ನೀರಾವರಿ ಯೋಜನೆ ಜಾರಿಗೆ ಬರುತ್ತಿದೆ ಎಂದರು.

ಅನರ್ಹ ಶಾಸಕ ಶಾಸಕ ಬಿ.ಸಿ. ಪಾಟೀಲ್

ಇನ್ನು, ಶಾಸಕರನ್ನು ದನ, ಕುರಿ, ಕೋಳಿಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯರ ಟೀಕೆಗೆ ಉತ್ತರಿಸಿದ ಬಿ.ಸಿ. ಪಾಟೀಲ್, ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್​ನಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ನಮ್ಮನ್ನ ಹೇಗೆ ನಡೆಸಿಕೊಂಡರು ಅನ್ನೋದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಇನ್ನು ಕುಮಾರಸ್ವಾಮಿ ಅವರಂತು ಕುಟುಂಬಕ್ಕೆ ಮಾತ್ರ ಸೀಮಿತರಾದರು. ಅಲ್ಲಿ ಎಲ್ಲವೂ ಸರಿಯಾಗಿದ್ದರೆ 14 ಮಂದಿ ಪಕ್ಷದಿಂದ ಹೊರಬರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಈಗಲೂ ಸಹ‌ ನಾವೆಲ್ಲಾ ಒಟ್ಟಾಗಿಯೇ ಇದ್ದೇವೆ,‌ ಪರಿಸ್ಥಿತಿಯನ್ನು ಒಟ್ಟಾಗಿಯೇ ಎದುರಿಸುತ್ತೇವೆ. 17 ಮಂದಿ ಶಾಸಕರನ್ನು ಅನರ್ಹಗೊಳಿಸಿದ ಅಂದಿನ ಸ್ಪೀಕರ್ ನಿಲುವು ಸಂವಿಧಾನ ಬಾಹಿರವಾದುದು. ಹೀಗಾಗಿ ನಾವು ಚುನಾವಣೆಗೆ ಸ್ಪರ್ಧಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ನಮ್ಮ ಪರವಾಗಿ ತೀರ್ಪು ಹೊರ ಬೀಳುವ ವಿಶ್ವಾಸವಿದೆ‌. ಉಪ ಚುನಾವಣೆಯಲ್ಲಿ ನಾನು ಖಂಡಿತ ಗೆಲ್ಲುತ್ತೇನೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಬಿ ಸಿ ಪಾಟೀಲ್​ ಅಭಿಪ್ರಾಯಪಟ್ಟರು.

For All Latest Updates

TAGGED:

ABOUT THE AUTHOR

...view details