ಮೈಸೂರು: ಜಿಲ್ಲೆಯಲ್ಲಿ 3,500 ಆಮ್ಲಜನಕಯುಕ್ತ ಹಾಸಿಗೆಗಳಿವೆ. ಪ್ರಸ್ತುತ 46 ಕೆ.ಎಲ್.ಆಕ್ಸಿಜನ್ ಬರುತ್ತಿದೆ. ಆಮ್ಲಜನಕ ಬೇಡಿಕೆ ಪೂರೈಸಲು ಜಿಲ್ಲೆಗೆ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಿಎಂಗೆ ಮನವಿ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮನವಿ ಮಾಡಿದರು. ಮೈಸೂರು ಜಿಲ್ಲೆಯಲ್ಲಿ ಸೋಂಕಿತರಿಗೆ ಆರಂಭದಲ್ಲೇ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ 'ಕೋವಿಡ್ ಮಿತ್ರ' ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಮೂಲಕ 10 ಸಾವಿರಕ್ಕೂ ಹೆಚ್ಚು ಜನರಿಗೆ ಟ್ರಯೇಜ್ ಮಾಡಲಾಗಿದೆ.