ಮೈಸೂರು: 4ನೇ ಹಂತದ ಲಾಕ್ಡೌನ್ ಈಗಾಗಲೇ ವಿಸ್ತರಣೆಯಾಗಿದ್ದು, ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳನ್ನು ಬಂದ್ ಮಾಡಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.
ನಾಳೆ ಅನಗತ್ಯವಾಗಿ ಓಡಾಡುವವರ ವಿರುದ್ಧ ಸೂಕ್ತ ಕ್ರಮ: ಮೈಸೂರು ನಗರ ಪೊಲೀಸ್ ಆಯುಕ್ತ - Dr. Chandragupta reaction about tomorrow lock down
ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ ಆದೇಶ ಜಾರಿ ಮಾಡಿದ ಹಿನ್ನೆಲೆ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಮೈಸೂರು ಜಿಲ್ಲೆಯನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತಿದ್ದು, ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.
ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ ಆದೇಶ ಜಾರಿ ಮಾಡಿದ ಹಿನ್ನೆಲೆ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಿಲ್ಲೆಯನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಾದ ವೈದ್ಯಕೀಯ, ಮೆಡಿಕಲ್ ಶಾಪ್, ದಿನಸಿ ಅಂಗಡಿಗಳನ್ನು ಬಿಟ್ಟು ಉಳಿದ ಮದ್ಯದ ಅಂಗಡಿಗಳು, ಅನಗತ್ಯ ವಾಹನ ಸಂಚಾರ ಯಾವುದಕ್ಕೂ ಅನುಮತಿ ಇರುವುದಿಲ್ಲ. ಭಾನುವಾರ ಸಂಪೂರ್ಣ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಒಟ್ಟು 36 ಗಂಟೆಗಳ ಕಾಲ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.