ಮೈಸೂರು:ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಭೀತಿ ಎದುರಾಗಿದ್ದು,ಅಕ್ಟೋಬರ್ 17ರಿಂದ ನವೆಂಬರ್ 1ರ ತನಕ ಮೈಸೂರು ಮೃಗಾಲಯ ಮತ್ತು ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ದಸರಾ ವೇಳೆ ಮೈಸೂರಿನ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ, ಜಿಲ್ಲಾಧಿಕಾರಿಗಳು ಮತ್ತು ದಸರಾ ವಿಶೇಷಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದಸರಾ-2020 ರ ಪೂರ್ವಸಿದ್ಧತಾ ಸಭೆಯಲ್ಲಿ 16 ದಿನಗಳ ಕಾಲ ಮೃಗಾಲಯವನ್ನು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಗೊಳಿಸಲಾಗಿದೆ.