ಮೈಸೂರು: ಶಾಲೆಗಳನ್ನು ತೆರಯುವುದಕ್ಕೆ ಸರ್ಕಾರ ಸಂಪೂರ್ಣ ಸಿದ್ಧವಿದೆ. ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,18 ವರ್ಷಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಆಗಿದೆ. ತಜ್ಞರ ಸಮಿತಿಯ ವರದಿ ಪಡೆದು ಮುಂದಿನ ವ್ಯವಸ್ಥೆ ಮಾಡಿಕೊಳ್ಳಲಾಗುವುದು. ಶಾಲೆಗಳನ್ನು ತೆರೆಯಲು ಸಾರ್ವಜನಿಕ ವಲಯದಲ್ಲಿ ಉತ್ತಮ ಸ್ಪಂದನೆ ಸಿಗಲಿದೆ ಎಂದು ಹೇಳಿದರು.