ಮೈಸೂರು: ಟ್ವಿಟರ್ನಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಹೆಸರಿನಲ್ಲಿ ನಕಲಿ ಖಾತೆಯೊಂದು ಸೃಷ್ಟಿಯಾಗಿದ್ದು, ಈ ನಕಲಿ ಖಾತೆ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಲಾಗಿದೆ.
ರಾಜವಂಶಸ್ಥ ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವೀಟ್ ಖಾತೆ! ರೈತರ ಸಮಸ್ಯೆ ಬಗೆಹರಿಸುವುದು ನಮ್ಮ ನೈತಿಕ ಬಾಧ್ಯತೆ. ಆತ್ಮೀಯ ನರೇಂದ್ರ ಮೋದಿಯವರೇ ರೈತರ ಸಮಸ್ಯೆ ಬಗೆಹರಿಸಿ ಎಂದು ಯದುವೀರ್ ಹೆಸರಿನಲ್ಲಿ ನಕಲಿ ಟ್ವೀಟ್ ಮಾಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿವೆ.
ಓದಿ:ಹಂಗಾಮಿ ಸಭಾಪತಿಯಾಗಿ ಕಾರ್ಯ ನಿರ್ವಹಿಸಲಿರುವ ಎಂ ಕೆ ಪ್ರಾಣೇಶ್
ಈ ಕುರಿತು ಈಟಿವಿ ಭಾರತದೊಂದಿಗೆ ದೂರವಾಣಿ ಕರೆ ಮೂಲಕ ಸ್ಪಷ್ಟಪಡಿಸಿರುವ ಯದುವೀರ್, ರೈತರಿಗೆ ಸಮಸ್ಯೆಗಳು ಎದುರಾದಾಗ ಅದನ್ನು ಬಗೆಹರಿಸುವುದು ಸರ್ಕಾರದ ಮಟ್ಟದಲ್ಲಿ ಆಗುವಂತದ್ದು.
ಈ ವಿಚಾರದಲ್ಲಿ ನನ್ನ ಹೆಸರಿನ ನಕಲಿ ಖಾತೆ ತೆಗೆದು ಟ್ವೀಟ್ ಮಾಡುವುದು ಸರಿಯಲ್ಲ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ನಾನು ದೂರು ದಾಖಲಿಸಿದ್ದೇನೆ. ಪದೇ ಪದೆ ಈ ರೀತಿ ನಕಲಿ ಖಾತೆ ಸೃಷ್ಟಿ ಮಾಡಲಾಗುತ್ತಿದೆ. ಇದನ್ನು ಯಾರು ನಂಬಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.