ಮೈಸೂರು: ಸಾಲಭಾದೆ ತಾಳಲಾರದೆ ರೈತನೊಬ್ಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ರೈತನ ಆತ್ಮಹತ್ಯೆಗೆ ಕಾರಣವಾಯ್ತು 3.65 ಲಕ್ಷ ಸಾಲ, ಸಾಯುವ ಕಾಲದಲ್ಲಿ ಬಡ್ಡಿ ಕಟ್ಟಲು ಕಾಸಿರಲಿಲ್ವಂತೆ - ಮೈಸೂರಲ್ಲಿ ನಾಲೆಗೆ ಹಾರಿ ರೈತ ಆತ್ಮಹತ್ಯೆ
3.20 ಎಕರೆ ಜಮೀನಿನಲ್ಲಿ ಬೆಳೆದ ಭತ್ತದ ಬೆಳೆ ರೋಗಕ್ಕೆ ತುತ್ತಾಗಿದ್ದು, ಮಾಡಿದ ಸಾಲ ತೀರಿಸಲಾಗದೆ ರೈತನೋರ್ವ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ರೈತ ಆತ್ಮಹತ್ಯೆ
ದೊಡ್ಡಕೊಪ್ಪಲು ಗ್ರಾಮದ ನಿವಾಸಿ ಪುರುಷೋತ್ತಮ (48), ಚುಂಚನಕಟ್ಟೆ ಸಮೀಪದ ರಾಮಸಮುದ್ರ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ 3.20 ಎಕರೆ ಜಮೀನಿನಲ್ಲಿ ಬೆಳೆದ ಭತ್ತದ ಬೆಳೆ ರೋಗಕ್ಕೆ ತುತ್ತಾಗಿತ್ತು. ಇವರು ಬೆಳೆಗಾಗಿ ಸಹಕಾರ ಸಂಘದಲ್ಲಿ 65 ಸಾವಿರ ಮತ್ತು 3 ಲಕ್ಷ ಕೈಸಾಲ ಮಾಡಿಕೊಂಡಿದ್ದರು. ಮಾಡಿದ ಸಾಲಕ್ಕೆ ಬಡ್ಡಿಯನ್ನೂ ಕಟ್ಟಲಾರದೆ ಸಾವಿಗೆ ಶರಣಾಗಿದ್ದಾರೆ.
ಇನ್ನು ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನಿದ್ದಾನೆ. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.