ಮೈಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.
ಮೈಸೂರು: ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟಿಸಿದ ಅನ್ನದಾತರು - black clothes
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಕಾಯ್ದೆಗಳನ್ನು ಅನುಷ್ಠಾನಕ್ಕೆ ತಾರದೆ, ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಈ ಕೂಡಲೇ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
![ಮೈಸೂರು: ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟಿಸಿದ ಅನ್ನದಾತರು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ರೈತರ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-10434442-thumbnail-3x2-lek.jpg)
ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪುತ್ಥಳಿ ಮುಂಭಾಗ ಜಮಾಯಿಸಿದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು, ರೈತ ದಲಿತ ಕಾರ್ಮಿಕ ಐಕ್ಯ ಹೋರಾಟಕ್ಕೆ ಬೆಂಬಲ ಸೂಚಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಕಾಯ್ದೆಗಳನ್ನು ಅನುಷ್ಠಾನಕ್ಕೆ ತಾರದೆ, ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಕಿಡಿಕಾರಿದರು.
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ದೇಶಾದ್ಯಂತ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ದೆಹಲಿಯಲ್ಲಿ 60 ದಿನಗಳಿಂದ ಪ್ರತಿಭಟನೆ ನಿರಂತರವಾಗಿ ನಡೆಯುತ್ತಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ರೈತ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.