ಮೈಸೂರು: ನಂಜನಗೂಡು ತಾಲೂಕಿನ ದೊಡ್ಡಕವಲಂದೇ ಹೋಬಳಿಯ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಜಿಂಕೆಗಳು ಹಾಗೂ ಕೃಷ್ಣಮೃಗಗಳು ದಿಕ್ಕಾಪಾಲಾಗಿ ಓಡಾಡಿ ಪ್ರಾಣ ರಕ್ಷಣೆ ಮಾಡಿಕೊಳ್ಳುತ್ತಿವೆ.
ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ಜೊತೆಗೆ ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಾಡು ಪ್ರಾಣಿಗಳು ಪರದಾಟ ನಡೆಸಿದವು.