ಮೈಸೂರು: ಆರ್ಥಿಕ ಮುಗ್ಗಟ್ಟಿನಿಂದ ಹತಾಶೆಗೊಂಡು ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಆರ್ಥಿಕ ಮುಗ್ಗಟ್ಟಿನಿಂದ ಹತಾಶೆಗೊಂಡು ಉದ್ಯಮಿ ಆತ್ಮಹತ್ಯೆ..! - mysore news
ರಿಯಲ್ ಎಸ್ಟೇಟ್ ಹಾಗೂ ಪ್ರಿಂಟಿಂಗ್ ಪ್ರೆಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೊಬ್ಬರು, ಆರ್ಥಿಕ ಮುಗ್ಗಟ್ಟಿನಿಂದ ಹತಾಶೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಕುವೆಂಪುನಗರ ನಿವಾಸಿ ರಮೇಶ್ (52) ಆತ್ಮಹತ್ಯೆಗೆ ಶರಣಾದ ಉದ್ಯಮಿ. ರಿಯಲ್ ಎಸ್ಟೇಟ್ ಹಾಗೂ ಪ್ರಿಂಟಿಂಗ್ ಪ್ರೆಸ್ ವ್ಯವಹಾರ ನಡೆಸುತ್ತಿದ್ದ ರಮೇಶ್, ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಇವರು, ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದ ಹೋಟೆಲ್ ಕೊಠಡಿಯೊಂದನ್ನ ಮಂಗಳವಾರ ಬಾಡಿಗೆ ಪಡೆದಿದ್ದರು. ಇಂದು ಸಂಜೆಯಾದರೂ ರಮೇಶ್ ಕೊಠಡಿಯಿಂದ ಆಚೆ ಬಾರದಿದ್ದಾಗ, ಹೋಟೆಲ್ ಸಿಬ್ಬಂದಿ ಅನುಮಾನದಿಂದ ಬಾಗಿಲು ತಳ್ಳಿ ನೋಡಿದಾಗ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.
ಕೂಡಲೇ ಹೋಟೆಲ್ನ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹವನ್ನ ಕೊರೊನಾ ಪರೀಕ್ಷೆ ಮಾಡಿ ಕುಟುಂಬಸ್ಥರಿಗೆ ನೀಡಲು ನಿರ್ಧರಿಸಿದ್ದಾರೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.