ಕರ್ನಾಟಕ

karnataka

ETV Bharat / city

ಜಿ.ಟಿ.ದೇವೇಗೌಡರ ಮೂರು ವರ್ಷದ ಮೊಮ್ಮಗಳು ನಿಧನ - MCDCC Bank president daughter die

ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ಶನಿವಾರ ರಾತ್ರಿ ಮೃತಪಟ್ಟಿದ್ದಾಳೆ.

ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನ
ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನ

By

Published : May 15, 2022, 10:00 AM IST

ಮೈಸೂರು: ಶಾಸಕ ಜಿ.ಟಿ‌.ದೇವೇಗೌಡರ ಮೊಮ್ಮಗಳು, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ‌.ಹರೀಶ್ ಗೌಡ ಅವರ ಮೂರು ವರ್ಷದ ಪುತ್ರಿ ಶನಿವಾರ ರಾತ್ರಿ ನಿಧನಳಾಗಿದ್ದಾಳೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಬಾಲಕಿಯನ್ನು ದಾಖಲು ಮಾಡಲಾಗಿತ್ತು. ಮೈಸೂರು ತಾಲೂಕಿನ ಗುಂಗಾಲ್ ಛತ್ರದ ತೋಟದ ಮನೆಯಲ್ಲಿ ಭಾನುವಾರ ಮಧ್ಯಾಹ್ನ 12ಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್‌ ಮತ್ತು ಕುಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ABOUT THE AUTHOR

...view details