ಕರ್ನಾಟಕ

karnataka

ETV Bharat / city

ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಅನ್ನೋದ್ರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ : ಹೆಚ್ ಡಿ ಕುಮಾರಸ್ವಾಮಿ - ಹೆಚ್ ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬುದು ಸಾಧ್ಯವಿಲ್ಲ. ಬಿಜೆಪಿಯಲ್ಲಿ ನಡೆಯುತ್ತಿರುವುದು ಕೂಡ ಕುಟುಂಬ ರಾಜಕಾರಣವೇ ಎಂದು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದರು.

ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ

By

Published : May 17, 2022, 11:02 PM IST

ಮೈಸೂರು : ಕಾಂಗ್ರೆಸ್ ಹಾಗೂ ಜೆಡಿಎಸ್​ನ ಪ್ರಬಲ ನಾಯಕರು ಬಿಜೆಪಿ ಪಕ್ಷಕ್ಕೆ ಬರುತ್ತಾರೆ ಎಂಬ ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎನ್ನುವುದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎರಡು ಪಕ್ಷಕ್ಕೂ ಸಂಪೂರ್ಣ ಬಹುಮತ ಬರುವ ವಿಶ್ವಾಸವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಯಾವತ್ತೂ ಒಂದು ಫ್ಯಾಮಿಲಿ ಒಂದು ಟಿಕೆಟ್ ಅಂತ ಹೇಳಿಲ್ಲ. ಕುಟುಂಬ ರಾಜಕಾರಣ ಮೋದಿ ಪ್ರಜಾಪ್ರಭುತ್ವಕ್ಕೆ ಮಾರಕ, ಆದರೆ ಬಿಜೆಪಿಯಲ್ಲಿ ನಡೆಯುತ್ತಿರುವುದು ಕೂಡ ಕುಟುಂಬ ರಾಜಕಾರಣವೇ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬುದು ಸಾಧ್ಯವಿಲ್ಲ. ಮೈಸೂರಿನ ಕಾಂಗ್ರೆಸ್ ನಾಯಕರು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ : ಮೈಸೂರು ಭಾಗದ ಜನ ಪ್ರತಿನಿಧಿಗಳ ಸಭೆ ಕರೆದಿದ್ದೇನೆ ನಾನು ಸಿಎಂ ಆದಾಗ ಪದವೀಧರರ ಉದ್ಯೋಗದ ಬಗ್ಗೆ ದೊಡ್ಡ ತೀರ್ಮಾನವನ್ನು ಕೈಗೊಂಡಿದ್ದೇನೆ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಕೃಷಿ ಇಲಾಖೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದೇನೆ. ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಸಲುವಾಗಿ ಮೈಸೂರು ಭಾಗದ ಜನಪ್ರತಿನಿಧಿಗಳ ಸಮಾಲೋಚನೆಯನ್ನು ಕರೆದಿದ್ದೇನೆ ಎಂದರು.

ಪಿಂಚಣಿ ವಿಚಾರವಾಗಿ ಯಾವುದೇ ತೀರ್ಮಾನ ಆಗಿಲ್ಲ:ಪಿಂಚಣಿ ವಿಚಾರವಾಗಿ ನಾವು ಯಾವುದೇ ತೀರ್ಮಾನವನ್ನು ಮಾಡಿಲ್ಲ ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ವ್ಯವಸ್ಥೆಯ ಬಗ್ಗೆಯೂ ಕೂಡ ಕ್ರಮ ತೆಗೆದುಕೊಳ್ಳುತ್ತೇವೆ. ಉದ್ಯೋಗ ಸಿಗುವವರೆಗೆ ಮೂರು ವರ್ಷಗಳ ಕಾಲ ಸ್ಟ್ರೈಫಂಡ್ ನೀಡಲು ಕ್ರಮ ಕೈಗೊಳ್ಳುತ್ತೇವೆ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ಹೇಳಲಾಗುವುದು ಎಂದು ಹೇಳಿಕೆ ನೀಡಿದರು

ರಾಮುಗೆ ಟಿಕೆಟ್ ನೀಡಿದ್ದು ಕುಮಾರಸ್ವಾಮಿ ಅಲ್ಲ ಕೋರ್ ಕಮಿಟಿ:ರಾಮುಗೆ ಟಿಕೆಟ್ ಕೊಟ್ಟಿರುವುದು ವೈಯಕ್ತಿಕ ತೀರ್ಮಾನವಲ್ಲ ಇದು ಆರ್ಥಿಕವಾಗಿಯೂ ನಡೆಯುವ ಚುನಾವಣೆ ಎಂದು ಜಗಜ್ಜಾಹೀರಾಗಿದೆ. ಪಕ್ಷಕ್ಕೆ ಬರುವವರು ಹೋಗುವವರ ವಿಚಾರವಾಗಿ ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರವನ್ನ ಮಾಡಲು ತೀರ್ಮಾನಿಸಲಾಗುವುದು, ತಕ್ಷಣ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡುವ ಬಗ್ಗೆ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ICUನಲ್ಲಿ ಚಿಕಿತ್ಸೆ ಪಡೀತಿದ್ದ ಪಾರ್ಶ್ವವಾಯು ಪೀಡಿತ ಮಹಿಳೆ ಕಣ್ಣಿನ ರೆಪ್ಪೆ ಕಚ್ಚಿ, ಕೂದಲು ತಿಂದ ಮೂಸಿಕ!

ABOUT THE AUTHOR

...view details