ಮೈಸೂರು :ಸತತವಾಗಿ ಸುರಿಯುತ್ತಿರುವ ಮಳೆಯಿಂದ ಶಾಲೆಗಳಿಗೆ ಮಕ್ಕಳು ಹೋಗಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ (Vacation to school-colleges) ಡಿಡಿಪಿಐ ಆದೇಶ (announce the DDPI) ಹೊರಡಿಸಿದ್ದಾರೆ.
ಕಳೆದ 20 ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನರು ತತ್ತರಿಸಿದ್ದಾರೆ. ಅಲ್ಲಲ್ಲಿ ರಸ್ತೆ ಸಂಚಾರವೂ ಸ್ಥಗಿತಗೊಂಡಿದೆ. ಜೊತೆಗೆ ಮಕ್ಕಳು ಶಾಲೆಗೆ ಹೋಗಲು ತೀವ್ರ ತೊಂದರೆ ಉಂಟಾಗಿದೆ.