ಮೈಸೂರು:ಹಕ್ಕಿ ಜ್ವರದ ಭೀತಿ ಹಿನ್ನೆಲೆ, ಕೇರಳದ ಗಡಿಭಾಗದ ಬಾವಲಿ ಚೆಕ್ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಹಕ್ಕಿ ಜ್ವರದ ಭೀತಿ ಹಿನ್ನೆಲೆ: ಕೇರಳ ಗಡಿಭಾಗದಲ್ಲಿ ಕಟ್ಟೆಚ್ಚರ - ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ಪೋಸ್ಟ್
ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಹೆಚ್.ಡಿ.ಕೋಟೆ ತಾಲೂಕಿನ ಕೇರಳ ಗಡಿಭಾಗದ ಬಾವಲಿ ಚೆಕ್ಪೋಸ್ಟ್ ಮೂಲಕ ಮೈಸೂರು ಜಿಲ್ಲೆಗೆ ಪ್ರವೇಶ ಮಾಡುವ ಹಾಗೂ ಮೈಸೂರಿನಿಂದ ಕೇರಳಕ್ಕೆ ಹೋಗುವ ಪ್ರತಿಯೊಂದು ವಾಹನವನ್ನೂ ತಪಾಸಣೆ ನಡೆಸಲಾಗುತ್ತಿದೆ.
ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಹೆಚ್.ಡಿ.ಕೋಟೆ ತಾಲೂಕಿನ ಕೇರಳ ಗಡಿಭಾಗದ ಬಾವಲಿ ಚೆಕ್ಪೋಸ್ಟ್ ಮೂಲಕ ಮೈಸೂರು ಜಿಲ್ಲೆಗೆ ಪ್ರವೇಶ ಮಾಡುವ ಹಾಗೂ ಮೈಸೂರಿನಿಂದ ಕೇರಳಕ್ಕೆ ಹೋಗುವ ಪ್ರತಿಯೊಂದು ವಾಹನವನ್ನ ಪೊಲೀಸರು ಹಾಗೂ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಜೊತೆಗೆ ಕೇರಳದಿಂದ ಮೈಸೂರು ಜಿಲ್ಲೆಗೆನ ಕೋಳಿ ಸಾಗಣೆ ನಿಷೇಧ ಮಾಡಲಾಗಿದೆ.
ಮೈಸೂರಿನಲ್ಲಿ ಹೈ ಅಲರ್ಟ್:4 ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆ, ಜಿಲ್ಲೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಮೈಸೂರು ಮೃಗಾಲಯ, ರಂಗನತಿಟ್ಟು ಪಕ್ಷಿಧಾಮ, ಕುಕ್ಕರಹಳ್ಳಿ ಕೆರೆ ಸೇರಿದಂತೆ ಪ್ರಮುಖ ಪಕ್ಷಿಧಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.