ಮೈಸೂರು: ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿದೆ. ಈ ಕುರಿತು ಪ್ರಾಮಾಣಿಕವಾಗಿ ತನಿಖೆ ನಡೆಯುತ್ತಿದೆ. ಖಂಡಿತವಾಗಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.