ಮೈಸೂರು: ಬೈಕ್ಗೆ ಕಾರು ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಕಾಳಿದಾಸ ರಸ್ತೆಯಲ್ಲಿ ಸಂಭವಿಸಿದೆ.
ಆ.29ರಂದು ಸಾಯಂಕಾಲ ಜಯಲಕ್ಷ್ಮಿಪುರಂನಿಂದ ಬರುತ್ತಿದ್ದ ಬೈಕ್ಗೆ ಕಾಳಿದಾಸ ರಸ್ತೆಯ ಸಿಗ್ನಲ್ ಬಳಿ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರೂ ಕಾರಿನ ಮೇಲಿಂದ ಹಾರಿ ಕೆಳಗೆ ಬಿದ್ದಿದ್ದಾರೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.