ಮೈಸೂರು: ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿದ್ದ ನಕಲಿ ನಂದಿನಿ ತುಪ್ಪ ತಯಾರಿಕಾ ಗೋಡೋನ್ ಮೇಲೆ ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ನಕಲಿ ನಂದಿನಿ ತುಪ್ಪ ತಯಾರಿಸಿ ಲೋಡ್ ಮಾಡಿ ಮೈಸೂರು ನಗರದಾದ್ಯಂತ ವಿತರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಹ್ಯೂಮನ್ ರೈಟ್ಸ್ ತಂಡ ದಾಳಿ ನಡೆಸಿದೆ. ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಕ್ಸ್ ಮಾಡಿ ನಕಲಿ ತುಪ್ಪ ತಯಾರಿ ಮಾಡಲಾಗುತ್ತಿತ್ತು. ಈ ನಕಲಿ ತುಪ್ಪವನ್ನು ಪ್ಯಾಕಿಂಗ್ ಮಾಡುತ್ತಿದ್ದ ವೇಳೆಯೇ ತಂಡದಿಂದ ದಾಳಿ ನಡೆಸಲಾಗಿದೆ.