ಕರ್ನಾಟಕ

karnataka

ETV Bharat / city

ವಿ.ಸೋಮಣ್ಣಗೆ ಮೈಸೂರು ಜಿಲ್ಲಾ ಉಸ್ತುವಾರಿ.. ಖಾತೆ ಯಾವುದಾದ್ರೂ ನಿಭಾಯಿಸ್ತಾರಂತೆ.. - ವಿ‌‌.ಸೋಮಣ್ಣ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಸ್ಥಳೀಯ ಶಾಸಕರು ಸಹಕಾರ ನೀಡದಿದ್ದರೆ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ‌‌.ಸೋಮಣ್ಣ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ವಿ.ಸೋಮಣ್ಣ

By

Published : Aug 24, 2019, 10:31 PM IST

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಸ್ಥಳೀಯ ಶಾಸಕರು ಸಹಕಾರ ನೀಡದಿದ್ದರೆ ಪಕ್ಷದ ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ‌‌.ಸೋಮಣ್ಣ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ವಿ.ಸೋಮಣ್ಣ ಮಾತುಕತೆ

ದಸರಾ ಸಭೆ ನಡೆಸಲು ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ. ಸ್ಥಳೀಯ ಶಾಸಕರು ಸಹಕಾರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಮೈಸೂರಿನಲ್ಲಿ ನಡೆಯುವ ರಾಜಕೀಯ ಬೆಳೆವಣಿಗೆಗಳನ್ನು ಪಕ್ಷದ ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.

ಇನ್ನು ರಾಜ್ಯ ಸರ್ಕಾರ ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಯಾವ ಖಾತೆಗೂ ಬೇಡಿಕೆ ಇಟ್ಟಿಲ್ಲ. ಪಕ್ಷ ಯಾವ ತೀರ್ಮಾನ ಕೈಗೊಳ್ಳಲಿದೆಯೋ ಅದಕ್ಕೆ ಬದ್ಧನಾಗಿರುತ್ತೇನೆ ಎಂದರು.

ABOUT THE AUTHOR

...view details