ಮೈಸೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸ್ ಇಲಾಖೆಯಲ್ಲಿ ವೈಫಲ್ಯ ಆಗಿದ್ದರೆ ಅವರ ತಲೆದಂಡವಾಗಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮೈಸೂರು ಪ್ರಕರಣದಲ್ಲಿ ಪೊಲೀಸರ ವೈಫಲ್ಯವಾಗಿದ್ದರೆ ಕ್ರಮ: ಸಚಿವ ಎಸ್.ಟಿ.ಸೋಮಶೇಖರ್ - Mysore district
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸ್ ಇಲಾಖೆಯಲ್ಲಿ ವೈಫಲ್ಯ ಆಗಿದ್ದರೆ, ಅವರ ತಲೆದಂಡದ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತನಿಖೆ ನಡೆಸುತ್ತಿರುವವರಲ್ಲಿ ಹಿರಿಯ ಅಧಿಕಾರಿಗಳಿದ್ದಾರೆ. ಅವರಿಗೆ ಸಂಪೂರ್ಣ ಮಾಹಿತಿ ಇದೆ. ಇಂದು ಪೊಲೀಸ್ ಇಲಾಖೆಯ ಸಭೆ ನಡೆಸಿದ ನಂತರ ವೈಫಲ್ಯ ಕಂಡುಬಂದರೆ ಅಧಿಕಾರಿಗಳ ತಲೆದಂಡದ ಕುರಿತು ತೀರ್ಮಾನಿಸಲಾಗುವುದು ಎಂದರು.
ಇದನ್ನೂ ಓದಿ: ಮೈಸೂರು ಅತ್ಯಾಚಾರ ಸಂತ್ರಸ್ತೆಯ ಸ್ನೇಹಿತನ ಹೇಳಿಕೆ ಪಡೆದ ಪೊಲೀಸರು: ಆತ ಹೇಳಿದ್ದಿಷ್ಟು..
ಇದೊಂದು ಸೂಕ್ಷ್ಮ ವಿಷಯವಾಗಿದ್ದು, ಆರೋಪಿಗಳಿಗೆ ಶಿಕ್ಷೆಯಾಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಮೈಸೂರಿನಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು. ಅಂತೆಯೇ ಈ ಪ್ರಕರಣಕ್ಕೊಂದು ತಾರ್ಕಿಕ ಅಂತ್ಯ ಹಾಡಲು ಪ್ರಯತ್ನ ನಡೆಸಿದ್ದೇವೆ ಎಂದು ಸಚಿವರು ಹೇಳಿದರು.