ಮೈಸೂರು :ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಪುತ್ರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ (32) ಎಂಬುವರು ಆತ್ಮಹತ್ಯೆಗೆ ಶರಣಾದವರು. ಗುರುವಾರ ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್ಮೆಂಟ್ನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಪ್ರದೀಪ್ ತಂದೆ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದು, ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಪಂ ಮಾಜಿ ಅಧ್ಯಕ್ಷರಾಗಿದ್ದಾರೆ.
ಆತ್ಮಹತ್ಯೆ ಹಿಂದೆ ಅನುಮಾನದ ಹುತ್ತ :ಈ ಆತ್ಮಹತ್ಯೆ ಹಿಂದೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಜೊತೆಗೆ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹೆಸರೂ ಸಹ ಕೇಳಿ ಬಂದಿದೆ. ವಿವಾಹಿತನಾಗಿದ್ದ ಇವರಿಗೆ ಎರಡು ಮಕ್ಕಳಿದ್ದರು. ಆದರೆ, ಮೈಸೂರು ನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಅವಿವಾಹಿತ ಸಬ್ಇನ್ಸ್ಪೆಕ್ಟರ್ವೊಬ್ಬರ ಪ್ರೇಮದ ಬಲೆಗೆ ಸಿಲುಕಿದ್ದರು ಎನ್ನಲಾಗಿದೆ.