ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಖಾಸಗಿ ಹೋಟೆಲ್ನಲ್ಲಿ ಪಕ್ಷದ ಚಿಂತನ ಮಂಥನ ಸಭೆಯನ್ನು ಕರೆದಿದ್ದಾರೆ. ಈ ಸಭೆಗೆ ಶಾಸಕ ಜಿ.ಟಿ. ದೇವೇಗೌಡ ಆಗಮಿಸುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೈಸೂರಿನಲ್ಲಿ ಕುಮಾರಸ್ವಾಮಿ ಬೆಳಗ್ಗೆ 11 ಗಂಟೆಗೆ ಖಾಸಗಿ ಹೋಟೆಲ್ನ ಸಭಾಂಗಣದಲ್ಲಿ ಪಕ್ಕದ ಸಂಘಟನೆ, ಚಿಂತನ-ಮಂಥನ ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ಶಾಸಕರು, ನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲೂಕು ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಆದರೆ ಜೆಡಿಎಸ್ ಪಕ್ಷದಿಂದ ತಟಸ್ಥರಾಗಿರುವ ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗವಹಿಸುತ್ತಾರಾ ಎಂಬ ಅನುಮಾನ ಜೆಡಿಎಸ್ ಮುಖಂಡರಲ್ಲಿದೆ. ಜೊತೆಗೆ ಕುಮಾರಸ್ವಾಮಿ ಅವರು ಜಿ.ಟಿ. ದೇವೇಗೌಡರನ್ನು ಮನವೊಲಿಸುತ್ತಾರೆಯೇ? ಎಂಬುದು ಸಹ ಕುತೂಹಲಕ್ಕೆ ಕಾರಣವಾಗಿದೆ.