ಮೈಸೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಧ್ಯಾಹ್ನ 12.50ಕ್ಕೆ ತಿ.ನರಸೀಪುರ ತಾಲೂಕಿನ ಜೆಡಿಎಸ್ ಕಚೇರಿಗೆ ಭೇಟಿ ನೀಡಿ, ನಂತರ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಜನತಾ ಜಲಧಾರೆ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಶ್ರೀ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಬಳಿ ವೇದಿಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಕೆ.ಆರ್.ನಗರಕ್ಕೆ ಭೇಟಿ ನೀಡುವರು. ನಂತರ ಸಂಜೆ 6 ಗಂಟೆಗೆ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಮಿಲನ್ ಪಂಕ್ಷನ್ ಹಾಲ್ನಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಲಿದ್ದಾರೆ.