ಕರ್ನಾಟಕ

karnataka

ETV Bharat / city

ತುಂಬುತ್ತಿರುವ ಕಬಿನಿ: ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ವರ್ಷಧಾರೆಯಿಂದಾಗಿ ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನೀರನ್ನು ನದಿಗೆ ಹರಿಸುವ ಸಾಧ್ಯತೆಯಿದೆ.

kabini dam
ಕಬಿನಿ ಜಲಾಶಯ

By

Published : Aug 4, 2020, 11:43 AM IST

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ.

ಕಬಿನಿ ಜಲಾಶಯ

ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 10 ಸಾವಿರ ಕ್ಯೂಸೆಕ್ ಇದ್ದು, 2 ಸಾವಿರ ಕ್ಯೂಸೆಕ್​ನಿಂದ 5 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುವ ಸಾಧ್ಯತೆಯಿದೆ.

ಕಬಿನಿ ಪ್ರಕಟಣೆ

ಇದರಿಂದಾಗಿ ಕಬಿನಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ. ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರಾದ ಎನ್.ಸುಜಾತ ಪ್ರಕಟಣೆಯಲ್ಲಿ ಈ ಬಗ್ಗೆ ಮನವಿ ಮಾಡಿದ್ದಾರೆ.

ABOUT THE AUTHOR

...view details