ಕರ್ನಾಟಕ

karnataka

ETV Bharat / city

ಉತ್ಕೃಷ್ಟ ಭಾರತದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ - ಆನಂದ್ ಸಂಕೇಶ್ವರ್​ಗೆ ಗೌರವ ಡಾಕ್ಟರೇಟ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಎ.ವಿ.ಎಸ್.ಮೂರ್ತಿ, ಈ.ಎಸ್.ಚಕ್ರವರ್ತಿ, ಆನಂದ್ ಸಂಕೇಶ್ವರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ

By

Published : Apr 25, 2022, 4:15 PM IST

ಮೈಸೂರು:ಆತ್ಮ ನಿರ್ಭರ ಭಾರತದ ಅಭಿವೃದ್ಧಿಗೆ ಪ್ರತಿಯೊಬ್ಬ ಪ್ರಜೆ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಿದಾಗ ಮಾತ್ರ ಉತ್ಕೃಷ್ಟ ಹಾಗೂ ಶ್ರೇಷ್ಠ ಭಾರತ ಕಟ್ಟಲು ಸಾಧ್ಯ ಎಂದು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯವು ಸಮರ್ಥ್ಯ ರಾಷ್ಟ್ರೀಯ ಜವಾಬ್ದಾರಿ ಜೊತೆಗೆ ಎಲ್ಲರಿಗೂ ಎಲ್ಲ ಕಡೆಯಲ್ಲೂ ಉನ್ನತ ಶಿಕ್ಷಣ ನೀಡುತ್ತಿರುವುದು ಪ್ರಶಂಸನೀಯವಾಗಿದೆ. ಗುರುಗಳ ಮಾರ್ಗದರ್ಶನ, ತಂದೆ - ತಾಯಿ ಪರಿವಾರ ಸಹಯೋಗದಿಂದ ವಿದ್ಯಾರ್ಥಿಗಳ ಸಾಧನೆಯ ಮಟ್ಟ ಮುಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ ಸಮಾಜ ಹಾಗೂ ಪೋಷಕರಿಗೆ ಗೌರವ ತಂದು ಕೊಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಘಟಿಕೋತ್ಸವದಲ್ಲಿ ವಿವಿಧ ವಿಷಯಗಳಲ್ಲಿ ಪದವಿ ಪಡೆದ 8,338 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಇದರಲ್ಲಿ 3,272 ಪುರುಷರು ಮತ್ತು 5,066 ಮಹಿಳಾ ಅಭ್ಯರ್ಥಿಗಳು ಇದ್ದರು. 31 ಮಂದಿಗೆ ಪಿಹೆಚ್​​ಡಿ ಪದವಿ ಪ್ರದಾನ ಮಾಡಲಾಯಿತು. 48 ಅಭ್ಯರ್ಥಿಗಳಿಗೆ ಚಿನ್ನದ ಪದಕ, 38 ಅಭ್ಯರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.

ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಗೌರವಾನ್ವಿತ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಾಟಾ ಗ್ಲೋಬಲ್ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಉಪಾಧ್ಯಕ್ಷ ಈ. ಎಸ್. ಚಕ್ರವರ್ತಿ, ವಿಆರ್​​ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸಂಕೇಶ್ವರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕರಾಮುವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಎ.ಬಿ.ಬಸವರಾಜ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ABOUT THE AUTHOR

...view details