ಮೈಸೂರು : ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ ಎಂದು ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿರುವುದು.. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರಪ್ಪ ಅವರು, ತಮ್ಮ ಇಲಾಖೆಯ ಮೇಲೆ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ. ಈತ ನಮ್ಮ ಇಲಾಖೆಯ ಮೇಲೆ ಆರೋಪ ಮಾಡಿರುವ ವಿಚಾರದಲ್ಲಿ ನಾನು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇನೆ ಎಂದರು.
ಓದಿ:ಗುತ್ತಿಗೆದಾರ ಆತ್ಮಹತ್ಯೆ: ಬಿಎಸ್ವೈ, ಅರುಣ್ ಸಿಂಗ್ ತಂಗಿದ್ದ ಹೋಟೆಲ್ ಮುತ್ತಿಗೆಗೆ ಆಪ್ ಯತ್ನ
ಸಂತೋಷ ಹಾಗೂ ಒಂದು ಖಾಸಗಿ ಚಾನಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ, ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ ಎಂದರು. ಕಾಂಗ್ರೆಸ್ ರಾಜೀನಾಮೆ ನೀಡುವಂತೆ ಆಗ್ರಹಿಸಿದೆ. ನಾನು ರಾಜೀನಾಮೆ ನೀಡುವುದಿಲ್ಲ. ತನಿಖೆ ನಡೆಯಲಿ ಎಂದು ಮೈಸೂರಿನಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ.. ಬೆಳಗಾವಿಯ ಸಂತೋಷ್ ಪಾಟೀಲ್ ಆತ್ಮಹತ್ಯೆ