ಮೈಸೂರು :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ತಂಡ ಇಂದು ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ 100 ಕೋಟಿ ರೂ. ಮೌಲ್ಯದ 47 ನಿವೇಶನಗಳನ್ನು ವಶಕ್ಕೆ ಪಡೆದಿದೆ.
ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್ ನೇತೃತ್ವದಲ್ಲಿ ನಡೆದ ತೆರವು ಕಾರ್ಯಾಚರಣೆಯಲ್ಲಿ ಮೈಸೂರು ತಾಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದ ಸರ್ವೆ ನಂ.118ರಲ್ಲಿ 5.14 ಎಕರೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದಿದೆ.
ಘಟನೆಯ ವಿವರ :50×80 ಅಳತೆಯ 11 ನಿವೇಶನ ಹಾಗೂ 40×60 ಅಳತೆಯ 36 ನಿವೇಶನದ ಜಮೀನು, ಒಟ್ಟು 100 ಕೋಟಿ ರೂ. ಮೌಲ್ಯದ ಸ್ವತ್ತು ಇದಾಗಿದೆ. ವಿಜಯನಗರ 4ನೇ ಹಂತ, 2ನೇ ಘಟ್ಟ ಬಡಾವಣೆ ನಿರ್ಮಾಣಕ್ಕಾಗಿ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು.