ಕರ್ನಾಟಕ

karnataka

ETV Bharat / city

ಮೈಸೂರು ಜಿಪಂ‌ ಜೆಡಿಎಸ್​​-ಬಿಜೆಪಿ ಮೈತ್ರಿ ಸಂಬಂಧ ಮುಖಂಡರಿಂದ ತೀರ್ಮಾನ: ಜಿಟಿಡಿ - ಜೆಡಿಎಸ್​​ ಬಿಜೆಪಿ ಮೈತ್ರಿ

ಫೆ. 23ರಂದು ಜಿಪಂ‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಂದಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇದೆ. ಈ ಸಂಬಂಧ ಸ್ಥಳೀಯ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಜಿ.ಟಿ.ದೇವೇಗೌಡ

By

Published : Feb 18, 2019, 3:14 PM IST

ಮೈಸೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಸಂಬಂಧ ಸ್ಥಳೀಯ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಫೆ. 23ರಂದು ಜಿಪಂ‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಂದಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇದೆ. ಆದರೆ ರಾಜ್ಯದಲ್ಲಿ‌ ಸಮ್ಮಿಶ್ರ ಸರ್ಕಾರ ಇರುವುದರಿಂದ ಜಿಪಂ ಸದಸ್ಯರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಜಿ.ಟಿ.ದೇವೇಗೌಡ

ಇದೇ ವೇಳೆ ಫೆ. 24-25 ರಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯಲ್ಲಿರುವ ಬೃಹತ್ ಉದ್ಯೋಗ ಮೇಳದ ವೆಬ್​ಸೈಟ್​ಗೆ ಚಾಲನೆ ನೀಡಿದರು. www.mysuruchnagarjobfair.com ಈ ವೆಬ್​ಸೈಟ್​ಗೆ ಭೇಟಿ ನೀಡಿ ಉದ್ಯೋಗಾಂಕ್ಷಿಗಳು ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ABOUT THE AUTHOR

...view details