ಮೈಸೂರು:ಕೋವಿಡ್ ಎರಡನೇ ಅಲೆ ಇನ್ನೂ ಮುಗಿದಿಲ್ಲ, ಮೂರನೇ ಅಲೆ ಆರಂಭವಾಗುತ್ತಿದೆ. ಸರ್ಕಾರದ ಯೋಜನೆಗಳು ಸಾಕಷ್ಟಿವೆ. ಆದರೆ ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾವಣೆ ಸೂಕ್ತವಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಅಭಿಪ್ರಾಯಪಟ್ಟರು.
ನಗರದ ರಮಾವಿಲಾಸ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾಮಾರಿ ಕೊರೊನಾ ನಡುವೆ ನಾಯಕತ್ವ ಬದಲಾವಣೆ ಸೂಕ್ತವಲ್ಲ ಎಂದು ಹೇಳುವ ಮೂಲಕ ಬಿಎಸ್ವೈ ಪರ ಬ್ಯಾಟಿಂಗ್ ಮಾಡಿದರು.