ಮೈಸೂರು:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರವಾಸಿ ನಗರಿಯ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸಜೀವ ಬಾಂಬ್ ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳಾದ ವಿಮಾನ ನಿಲ್ದಾಣ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಚರ್ಚ್ ಹಾಗೂ ಅರಮನೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅನುಮಾನಾಸ್ಪದ ವಸ್ತುಗಳು ಅಥವಾ ಬ್ಯಾಗ್ಗಳು ಕಂಡುಬಂದರೆ ಕೂಡಲೇ ತಿಳಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.