ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಮ್ ಇಲ್ಲ ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಲೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಬಿಎಸ್ವೈಗೆ ಧಮ್ ಇಲ್ಲ ಎಂದ ಸಿದ್ದರಾಮಯ್ಯ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು: ಸಚಿವ ಈಶ್ವರಪ್ಪ - ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ್ದ ಸಿದ್ದರಾಮಯ್ಯಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು.
ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಧಮ್ ಇಲ್ಲ. ಅವರಿಗೆ ಧಮ್ ಇದ್ದಿದ್ದರೆ ಏಕೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು. ಲೋಕಸಭೆಯಲ್ಲಿ 25 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಮೂಲಕ ಬಿಜೆಪಿಯ ಧಮ್ ಏನೆಂದು ತೋರಿಸಿಕೊಟ್ಟಿದೆ ಎಂದು ತಿರುಗೇಟು ನೀಡಿದರು.
ಜಾತಿ, ಜಾತಿ ಎನ್ನುತ್ತಾ ಸ್ವಜಾತಿಯವರನ್ನು ಬಳಸಿ ಅವರಿಗೆ ಮೋಸ ಮಾಡಿದ್ದೀರಿ ಎಂದ ಅವರು, ಹೆಚ್.ವಿಶ್ವನಾಥ್ ಅವರ ಜೊತೆಗೆ ಪಕ್ಷದ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಸ್ಥಾನಮಾನ ಕಲ್ಪಿಸುವ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.