ಮೈಸೂರು: ಯಾವುದೋ ಪೂರ್ವ ಜನ್ಮದ ಪುಣ್ಯದಿಂದ ಸಚಿವನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅದರಲ್ಲಿ ನಾನು ತೃಪ್ತಿ ಪಡುತ್ತೇನೆ ಎಂದು ಸಚಿವ ಮುನಿರತ್ನ ಹೇಳಿದರು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಪೂರ್ವ ಜನ್ಮದ ಪುಣ್ಯದಿಂದ ಸಚಿವ ಸ್ಥಾನ ಸಿಕ್ಕಿದೆ: ಸಚಿವ ಮುನಿರತ್ನ - Mysore
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಚಿವ ಮುನಿರತ್ನ ಭೇಟಿ ನೀಡಿದರು.
ಸುತ್ತೂರು ಶಾಖಾ ಮಠಕ್ಕೆ ಸಚಿವ ಮುನಿರತ್ನ ಭೇಟಿ
ಬಡವರಿಗೆ, ರಾಜ್ಯಕ್ಕೆ ಒಳ್ಳೆಯದು ಮಾಡುವ ಯಾವುದೇ ಖಾತೆ ಕೊಟ್ಟರು ನಾನು ನಿಭಾಯಿಸಲು ಸಿದ್ದನಿದ್ದೇನೆ. ಕೋವಿಡ್, ಪ್ರವಾಹ ಸಂದರ್ಭದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಮುಂದೆಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಸರ್ಕಾರ ಲಾಕ್ ಡೌನ್ ಮಾಡಿದೆ ಎಂದು ಹೇಳುವುದಲ್ಲ. ಜನಸಾಮಾನ್ಯರಾದ ನಾವೂ ಕೂಡ ಓಡಾಟ ಕಡಿಮೆ ಮಾಡಬೇಕು. ಕೊರೊನಾ ವಿಕೋಪಕ್ಕೆ ಹೋಗದ ರೀತಿ ತಡೆಯಲು ಸಹಕಾರ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿದರು.