ಮೈಸೂರು: ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ವಯಂ ಪ್ರೇರಿತವಾಗಿ ಹೋಮ್ ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ.
ಆಪ್ತ ಸಿಬ್ಬಂದಿಗೆ ಕೊರೊನಾ: ಸಚಿವ ಎಸ್.ಟಿ.ಸೋಮಶೇಖರ್ ಹೋಮ್ ಕ್ವಾರಂಟೈನ್
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಕಚೇರಿಯ ಆಪ್ತ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಸ್ವಯಂ ಪ್ರೇರಿತ ಹೋಮ್ ಕ್ವಾರಂಟೈನ್ಗೆ ಸಚಿವರು ಒಳಪಟ್ಟಿದ್ದಾರೆ.
ಸಚಿವ ಎಸ್.ಟಿ.ಸೋಮಶೇಖರ್
ಸಚಿವರ ಕಚೇರಿಯ ಆಪ್ತ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುವುದು. ಸೋಮಶೇಖರ್ ಅವರು ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದು, 7 ದಿನಗಳ ಕಾಲ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ತಿಳಿಸಿದ್ದಾರೆ.
ಅಲ್ಲದೆ ಇಂದು ಮೈಸೂರಿನಲ್ಲಿ ನಡೆಯಬೇಕಿದ್ದ ಪೂರ್ವ ನಿಯೋಜಿತ ಕಾರ್ಯಕ್ರಮ ಸಹ ರದ್ದಾಗಿದೆ ಎಂದು ಅವರು ಹೇಳಿದ್ದಾರೆ.